ಉಡುಪಿ: ಮಹಿಳೆಯ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಚಿಕುಮೇರಿಯಲ್ಲಿ ಮಹಿಳೆಯನ್ನು ಕೊಲೆ ಮಾಡಲು ಯತ್ನಿಸಿ ಸೂಟ್‌ಕೇಸ್‌ನಲ್ಲಿ ತುಂಬಿಸಿ ಸಾಗಿಸಲು ಯತ್ನಿಸಿದ ಮಿಥುನ್ ಹಾಗೂ ನಾಗೇಶ್ ಪೂಜಾರಿಗೆ ಉಡುಪಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2022ರಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

