ಬ್ರಹ್ಮಾವರ: ವೃದ್ಧ ದಂಪತಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಆರೋಪಿ ಬಂಧನ, 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ
ಬ್ರಹ್ಮಾವರದ ಹೇರಾಡಿ ಗ್ರಾಮದಲ್ಲಿ ವೃದ್ಧ ದಂಪತಿ ಮನೆಯಿಂದ 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದ ಬಾರಕೂರು ನಿವಾಸಿ ಪ್ರವೀಣ್ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳುವಾದ ಬಹುತೇಕ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

