ಬೀಜಾಡಿ: ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಟಿಪ್ಪರ್; ಮಹಿಳೆ ಸ್ಥಳದಲ್ಲೇ ಸಾವು
ಬೀಜಾಡಿ ಹೆದ್ದಾರಿಯಲ್ಲಿ ಸ್ಕೂಟಿಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ವಡ್ಡರ್ಸೆ ನಿವಾಸಿ ಶಾರದಾ (55) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂಗಿಯ ಮನೆಗೆ ಮಗನೊಂದಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮಗ ಅಪಾಯದಿಂದ ಪಾರಾಗಿದ್ದಾರೆ.

