ಬ್ರಹ್ಮಾವರ: ಮದುವೆಗೆ ನಿರಾಕರಿಸಿದ ಯುವತಿಗೆ ಚೂರಿಯಿಂದ ಇರಿತ, ಆಸ್ಪತ್ರೆಗೆ ದಾಖಲು

ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಶುಕ್ರವಾರ ಬೆಳಿಗ್ಗೆ ಯುವಕನೊಬ್ಬ ತಾನು ಪ್ರೀತಿಸಿದ ಪಕ್ಕದ ಮನೆಯ ಯುವತಿಯನ್ನು ಮದುವೆಗೆ ನಿರಾಕರಿಸಿದ ಕಾರಣಕ್ಕೆ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಗಾಯಗೊಂಡ ಯುವತಿಯನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬ್ರಹ್ಮಾವರ: ಮದುವೆಗೆ ನಿರಾಕರಿಸಿದ ಯುವತಿಗೆ ಚೂರಿಯಿಂದ ಇರಿತ, ಆಸ್ಪತ್ರೆಗೆ ದಾಖಲು

ಬ್ರಹ್ಮಾವರ, ಸೆ.12, 2025: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯ ಪೂಜಾರಿಬೆಟ್ಟು ನಿವಾಸಿ 24 ವರ್ಷದ ರಕ್ಷೀತಾ ಅವರನ್ನು ಶುಕ್ರವಾರ ಬೆಳಿಗ್ಗೆ 8:30ರ ಸುಮಾರಿಗೆ ಪಕ್ಕದ ಮನೆಯ ಯುವಕ ಕಾರ್ತಿಕ್ ಪೂಜಾರಿ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದಾನೆ. ಮದುವೆಗೆ ನಿರಾಕರಿಸಿದ ಕಾರಣಕ್ಕೆ ಈ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷೀತಾ ಅವರು ಮನೆಯಿಂದ ಮಣಿಪಾಲದ ಕೆಲಸಕ್ಕೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ, ಕಾರ್ತಿಕ್ ಅವರು ಬೈಕ್‌ನಲ್ಲಿ ಅಡ್ಡು ಬಂದು ಚೂರಿಯಿಂದ ದಾಳಿ ಮಾಡಿದ್ದಾರೆ. ಆಕೆಯ ಕತ್ತಿನ ಮತ್ತು ಹೊಟ್ಟೆಯ ಎರಡೂ ಬದಿಗಳಿಗೆ ಚೂರಿ ಇರಿದ್ದಾರೆ. ಆಕೆಯ ಜನ್ಮದಿನದಂದು ಈ ಘಟನೆ ನಡೆದಿದ್ದು, ಆರೋಪಿ ಕಾರ್ತಿಕ್ ಅವರ ಫೋನ್ ನಂಬರ್ ಅವರು ಕಳೆದ ಎರಡು ವಾರಗಳಿಂದ ಬ್ಲಾಕ್ ಮಾಡಿದ್ದಾರೆ. ಆಕೆಯ ಕುಟುಂಬವು ಮದುವೆಗೆ ವಿರೋಧಿಸಿರುವುದರಿಂದ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿ ರಕ್ಷೀತಾ ಅವರು ಕುಸಿದು ಬಿದ್ಧರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಆಕೆಯನ್ನು ತಕ್ಷಣ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, “ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ. ಆರೋಪಿಯನ್ನು ಬಂಧಿಸಲು ಕಾರ್ಯಾಚರಣೆ ಚುರುಕುಗೊಂಡಿದೆ,” ಎಂದು ತಿಳಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ