ಬೈಂದೂರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ: ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಅಧಿಕಾರ ಸ್ವೀಕಾರ
ಬೈಂದೂರು ರೋಟರಿ ಕ್ಲಬ್‌ನ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಅರುಣ್ ಕುಮಾರ್ ಶಿರೂರು ಅಧಿಕಾರ ಸ್ವೀಕರಿಸಿದ್ದಾರೆ. ಪದಪ್ರಧಾನ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಗಾಲಿ ಕುರ್ಚಿ ಹಸ್ತಾಂತರಿಸಲಾಯಿತು.

