ಬೆಂಗಳೂರು: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸ್ವಾಗತ; ರಾಜ್ಯದ ಪ್ರಗತಿಗಾಗಿ 18 ಪ್ರಮುಖ ಬೇಡಿಕೆಗಳ ಮನವಿ ಸಲ್ಲಿಕೆ
ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ನೀರಾವರಿ, ರೈಲ್ವೆ ಮತ್ತು ಹಣಕಾಸಿನ ನೆರವಿಗೆ ಸಂಬಂಧಿಸಿದ 18 ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು. ಮೇಕೆದಾಟು, ಭದ್ರಾ ಮೇಲ್ದಂಡೆ ಮತ್ತು ಬೆಂಗಳೂರಿಗೆ 26,000 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿದರು.

