ದೋಹಾ: ಭಾರತೀಯ ಸಂಘಟನೆಗಳ ನಡುವೆ ಒಗ್ಗಟ್ಟು ಹಾಗೂ ಪರಸ್ಪರ ಸಹಕಾರಕ್ಕೆ ಡೆಪ್ಯುಟಿ ಚೀಫ್ ಆಫ್ ಮಿಷನ್ ಸಂದೀಪ್ ಕುಮಾರ್ ಕರೆ
ಕರ್ನಾಟಕ ಸಂಘ ಕತಾರ್ (ಕೆಎಸ್‌ಕ್ಯು) ನೂತನ ಸಮಿತಿಯು ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ನೇತೃತ್ವದಲ್ಲಿ ಭಾರತೀಯ ರಾಯಭಾರ ಕಚೇರಿಯ ಡಿಸಿಎಂ ಸಂದೀಪ್ ಕುಮಾರ್ ಅವರನ್ನು ಭೇಟಿಯಾಯಿತು. ಭಾರತೀಯ ಸಂಘಟನೆಗಳು ಒಗ್ಗಟ್ಟಿನಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಡಿಸಿಎಂ ಕರೆ ನೀಡಿದರು.

