ಧರ್ಮಸ್ಥಳ, ಆಗಸ್ಟ್ 23, 2025: ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿರುವ ಆರೋಪದ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ದೂರುದಾರನನ್ನೇ ಬಂಧಿಸಿದ್ದು, ಬೆಳ್ತಂಗಡಿ ನ್ಯಾಯಾಲಯವು ದೂರುದಾರನನ್ನು 10 ದಿನಗಳ ಎಸ್‌ಐಟಿ ಕಸ್ಟಡಿಗೆ ಒಪ್ಪಿಸಿದೆ. ಈ ಬೆಳವಣಿಗೆಯ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಡಾ. ಹೆಗ್ಗಡೆ ಹೇಳಿಕೆಯಲ್ಲಿ, “ಎಸ್‌ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚಿನ ಮಾಹಿತಿ ನೀಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ, ಇದರಿಂದ ಸಂತಸವಾಗಿದೆ. ಈಗ ಎಲ್ಲ ಆರೋಪಗಳಿಂದ ತೊಳೆದಂತಾಗಿದೆ. ಭಕ್ತರ ಪ್ರೀತಿ ಮತ್ತು ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ, ಭಗವಂತ ನಮ್ಮೊಂದಿಗೆ ಇದ್ದಾನೆ,” ಎಂದಿದ್ದಾರೆ.