ಬೆಳ್ತಂಗಡಿ, ಆಗಸ್ಟ್ 23, 2025: ಧರ್ಮಸ್ಥಳದಲ್ಲಿ ಹಲವಾರು ಮೃತದೇಹಗಳನ್ನು ಹೂತುಹಾಕಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ದಳ (ಎಸ್.ಐ.ಟಿ) ಅನಾಮಿಕ ದೂರುದಾರನನ್ನು ಬಂಧಿಸಿದೆ. ಆರೋಪಿಯನ್ನು ಆರೋಗ್ಯ ತಪಾಸಣೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಶನಿವಾರ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗುವುದು ಎಂದು ಎಸ್.ಐ.ಟಿ ಮೂಲಗಳಿಂದ ತಿಳಿದುಬಂದಿದೆ.
ಆಗಸ್ಟ್ 22ರಂದು ಮಂಗಳೂರು ಸಕ್ಷಮ ಪ್ರಾಧಿಕಾರವು ದೂರುದಾರನಿಗೆ ನೀಡಲಾಗಿದ್ದ ಸಾಕ್ಷಿ ರಕ್ಷಣಾ ಕಾಯ್ದೆಯನ್ನು ರದ್ದುಗೊಳಿಸಿತು. ಇದರ ಬೆನ್ನಲ್ಲೇ, ಶುಕ್ರವಾರ ಬೆಳಿಗ್ಗೆ ದೂರುದಾರನನ್ನು ಎಸ್.ಐ.ಟಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಶನಿವಾರ ಬೆಳಿಗ್ಗೆ ಆತನನ್ನು ಬಂಧಿಸಲಾಯಿತು.
ಪೊಲೀಸರ ಮುಂದೆ ದೂರುದಾರನು ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದು, ಈ ಕುರಿತು ಎಸ್.ಐ.ಟಿ ತಂಡವು ಮತ್ತಷ್ಟು ತನಿಖೆ ನಡೆಸಲಿದೆ ಎಂದು ನಿರೀಕ್ಷಿಸಲಾಗಿದೆ.