ಗಂಗೊಳ್ಳಿ, ಸೆಪ್ಟೆಂಬರ್ 07, 2025: ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗ ಮತ್ತು ರೋಟರಿ ಕ್ಲಬ್ ಗಂಗೊಳ್ಳಿ ಜಂಟಿ ಆಶ್ರಯದಲ್ಲಿ ಮೇಲ್ ಗಂಗೊಳ್ಳಿಯ ಅಂಬೇಡ್ಕರ್ ಸಭಾಭವನದಲ್ಲಿ ಶಿಕ್ಷಕರ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ನರೇಂದ್ರ ಎಸ್ ಗಂಗೊಳ್ಳಿ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ನಿವ್ರತ್ತ ಮುಖ್ಯೋಪಾಧ್ಯಾಯರಾದ ಜಿ ವಿಶ್ವನಾಥ್ ಭಟ್, ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಗುರುರಾಜ್ ಆಚಾರ್ಯ, ಸಹ ಶಿಕ್ಷಕರಾದ ಯೋಗೀಶ್, ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ ಉಡುಪಿ ಜಿಲ್ಲಾಧ್ಯಕ್ಷರಾದ ಫಿಲೋಮಿನಾ ಫರ್ನಾಂಡಿಸ್, ಅಂಗನವಾಡಿ ಕಾರ್ಯಕರ್ತೆಯರಾದ ರೇಖಾ, ಸಹನಾ, ಅಕ್ಷರ ದಾಸೋಹ ಕಾರ್ಯಕರ್ತರಾದ ಶಕುಂತಲಾ ಖಾರ್ವಿ, ಮೂಕಾಂಬು, ಅವರನ್ನು ಸನ್ಮಾನಿಸಲಾಯಿತು
ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಗಂಗೊಳ್ಳಿ ಅಧ್ಯಕ್ಷ ಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಸಂಚಾಲಕ ಈಶ್ವರ ಗಂಗೊಳ್ಳಿ ಶುಭ ಹಾರೈಸಿದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ತಬ್ರೇಜ್, ದೀಪಾ ಸುರೇಶ್, ಕಲಾಶ್ರೀ ಶಿಕ್ಷಣ ಪ್ರೇಮಿಗಳ ಬಳಗದ ಅಧ್ಯಕ್ಷೆ ಸುಮಿತ್ರ ಈಶ್ವರ್, ಆನಂದ್ ಕೆ. ವಕೀಲರು, ಜ್ಯೋತಿ ಆನಂದ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಸಾನ್ವಿ ಕಾರ್ಯಕ್ರಮವನ್ನು ನಿರೂಪಿಸಿದರು, ರಶ್ಮಿತಾ ಸ್ವಾಗತಿಸಿದರು, ಮತ್ತು ಅನ್ವಿತಾ ವಂದನೆ ಸಲ್ಲಿಸಿದರು.