ಗಂಗೊಳ್ಳಿ, ಆಗಸ್ಟ್ 17, 2025: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಗಂಗೊಳ್ಳಿ, ಮತ್ತು ಜೆಸಿಐ ಗಂಗೊಳ್ಳಿಯ ಜಂಟಿ ಆಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವು ದಿನಾಂಕ 16 ಆಗಸ್ಟ್ 2025ರಂದು ಬೆಳಿಗ್ಗೆ 11:00 ಗಂಟೆಗೆ ಶ್ರೀ ಶಾರದಾ ಮಂಟಪ, ಗಂಗೊಳ್ಳಿಯಲ್ಲಿ ಯಶಸ್ವಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಖಾರ್ವಿ ಯವರು ಅಧ್ಯಕ್ಷತೆ ವಹಿಸಿ ಉದ್ಘಾಟನೆಯನ್ನು ನೆರವೇರಿಸಿದರು, ಡಾ. ಅಮಿತಾ ಅವರು ಸ್ತನ್ಯಪಾನದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.


ಮುಖ್ಯ ಅತಿಥಿಗಳು:
- ವಿಜೇಂದ್ರ ಕೆ., ಯೋಜನಾ ನಿರ್ದೇಶಕರು, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸೊಸೈಟಿ, ಉಡುಪಿ
- ಕೃಷ್ಣ ಪೂಜಾರಿ, ಅಧ್ಯಕ್ಷರು, ರೋಟರಿ ಕ್ಲಬ್, ಗಂಗೊಳ್ಳಿ
- ರೋಶನ್ ಖಾರ್ವಿ, ಅಧ್ಯಕ್ಷರು, ಜೆಸಿಐ ಗಂಗೊಳ್ಳಿ
- ಅನೂಪ್ ಶೇಟ್, ಕಾರ್ಯದರ್ಶಿ, ಗಂಗೊಳ್ಳಿ ಗ್ರಾಮ ಪಂಚಾಯತ್
- ಝಹೀರ್ ಅಹ್ಮದ್ ನಾಖುದಾ, ಕರ್ನಾಟಕ ರಾಜ್ಯ ಸರಕಾರದ ಕುಂದಾಪುರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರು
- ರೇಖಾ, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ, ಕುಂದಾಪುರ
ಕಾರ್ಯಕ್ರಮವನ್ನು ಫಿಲೋಮಿನಾ ಟೀಚರ್ ನಿರೂಪಿಸಿದರು. ಗಂಗೊಳ್ಳಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಮತ್ತು ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ಸ್ತನ್ಯಪಾನದ ಮಹತ್ವದ ಬಗ್ಗೆ ಜಾಗೃತಿಯನ್ನು ಮೂಡಿಸಿತು ಮತ್ತು ಸಮುದಾಯದಲ್ಲಿ ಆರೋಗ್ಯಕರ ತಾಯಿ-ಮಗುವಿನ ಬಾಂಧವ್ಯವನ್ನು ಉತ್ತೇಜಿಸಿತು. ಆಯೋಜಕರು ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.