ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ
ದೇವಿಕೊಪ್ಪ ಗ್ರಾಮದ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದ್ದು, ಕಲಘಟಗಿ-ಯಲ್ಲಾಪುರ ರಸ್ತೆಯನ್ನು ಬಂದ್ ಮಾಡಲಾಗಿದೆ. ವಾಹನ ಸವಾರರು ಮುಂಡಗೋಡ ಮತ್ತು ಹಳಿಯಾಳ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

