ಗುಜ್ಜಾಡಿ: ರಾಜ್ಯ ಸರ್ಕಾರದ ಕರಾವಳಿ ವಿರೋಧಿ ಧೋರಣೆ ಖಂಡಿಸಿ ಬಿಜೆಪಿ ಪ್ರತಿಭಟನೆ; ಅನುದಾನ ಬಿಡುಗಡೆಗೆ ಆಗ್ರಹ
ಕರಾವಳಿ ಭಾಗಕ್ಕೆ ಅನುದಾನ ಬಿಡುಗಡೆ ಮಾಡುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಗುಜ್ಜಾಡಿ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕುಡಿಯುವ ನೀರು, ಬೀದಿ ದೀಪ ಮತ್ತು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

