ಅಂಕೋಲಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಆಗಸ್ಟ್ 28, 2025ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಆಗಸ್ಟ್ 28, 2025ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ: ಆಗಸ್ಟ್ 28, 2025ರಂದು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD), ಬೆಂಗಳೂರು ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಾದ್ಯಂತ ಆಗಸ್ಟ್ 28, 2025ರಂದು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಮತ್ತು ದಾಂಡೇಲಿ ತಾಲ್ಲೂಕುಗಳಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳು, ಅಂಗನವಾಡಿಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಕ್ಕಳಿಗೆ ಅನಾನುಕೂಲವಾಗದಂತೆ ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ರಜೆ ಘೋಷಿಸಲಾಗಿದೆ. ಆದ್ದರಿಂದ, ಪೋಷಕರು ಮತ್ತು ವಿದ್ಯಾರ್ಥಿಗಳು ಸಹಕರಿಸುವಂತೆ ಜಿಲ್ಲಾಡಳಿತ ಕೋರಿದೆ.

ಈ ಲೇಖನವನ್ನು ಹಂಚಿಕೊಳ್ಳಿ