ಹೂಡೆ: ಸಾಲಿಹಾತ್ ಪಿಯು ಕಾಲೇಜಿಗೆ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಫಲಿತಾಂಶ; ಸನಾ ಫಿರ್ದೌಸ್ ಕಾಲೇಜಿಗೆ ಪ್ರಥಮ

ಹೂಡೆಯ ಸಾಲಿಹಾತ್ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸನಾ ಫಿರ್ದೌಸ್ (579) ಮತ್ತು ವಿಜ್ಞಾನ ವಿಭಾಗದಲ್ಲಿ ನಖ್ವಾ ಫಾಝಿಲಾ (555) ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಒಟ್ಟು 22 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ