ದ್ವಿತೀಯ ಪಿಯುಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ!
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ (93.90%) ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದರೆ, ದಕ್ಷಿಣ ಕನ್ನಡ (93.57%) ದ್ವಿತೀಯ ಸ್ಥಾನ ಪಡೆದಿದೆ. ಒಟ್ಟಾರೆ ಶೇ. 86.48ರಷ್ಟು ಫಲಿತಾಂಶ ದಾಖಲಾಗಿದ್ದು, ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

