ಬೆಂಗಳೂರು: ಎಸ್‌ಸಿ ಒಳಮೀಸಲಾತಿ ಜಾರಿ ಘೋಷಿಸಿದ ಸಿಎಂ ಸಿದ್ದರಾಮಯ್ಯ; ಕಾಂಗ್ರೆಸ್ ನಾಯಕರಿಂದ ಸಿಹಿ ಹಂಚಿ ಸಂಭ್ರಮಾಚರಣೆ
ಸಿಎಂ ಸಿದ್ದರಾಮಯ್ಯ ಎಸ್‌ಸಿ ಒಳಮೀಸಲಾತಿಯನ್ನು ಘೋಷಿಸಿದ್ದಾರೆ. ಎಡಗೈ ಮತ್ತು ಬಲಗೈ ಸಮುದಾಯಕ್ಕೆ ತಲಾ ಶೇ. 5.25 ಹಾಗೂ ಇತರೆ ಸಮುದಾಯಗಳಿಗೆ ಶೇ. 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದ್ದು, ಕಾಂಗ್ರೆಸ್ ನಾಯಕರು ಈ ನಿರ್ಧಾರವನ್ನು ಸಂಭ್ರಮಿಸಿದ್ದಾರೆ.
