ಕಾರವಾರ: ಆಸ್ತಿಗಾಗಿ ತಂದೆಯನ್ನೇ ಹತ್ಯೆ ಮಾಡಿದ ಮಗ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ
ಹಳಿಯಾಳದ ಬಿದ್ರೊಳ್ಳಿಯಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಮಗ ಸೇರಿದಂತೆ ಮೂವರಿಗೆ ಕಾರವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2019ರಲ್ಲಿ ನಡೆದ ಈ ಕೊಲೆ ಪ್ರಕರಣದಲ್ಲಿ ತನಿಖೆ ಪೂರ್ಣಗೊಳಿಸಿ ಸಾಕ್ಷ್ಯಧಾರಗಳನ್ನು ಒದಗಿಸಿದ ಪೊಲೀಸರ ಕಾರ್ಯವೈಖರಿಯನ್ನು ಇಲಾಖೆ ಶ್ಲಾಘಿಸಿದೆ.

