ಸಹಕಾರಿ ಸಂಘಗಳ ಚಟುವಟಿಕೆಗಳ ಮೇಲೆ ತೀವ್ರ ನಿಗಾ ವಹಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶ

ಕಾರವಾರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಸಹಕಾರಿ ಸಂಘಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ನಿಯಮಿತ ತಪಾಸಣೆ ನಡೆಸಲು ಮತ್ತು ಮುಂಡಗೋಡು, ಹಳಿಯಾಳ ಭಾಗಗಳಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸುವ ಅನಧಿಕೃತ ಖಾಸಗಿ ಫೈನಾನ್ಸ್‌ಗಳ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಲು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.