ಕಾರವಾರ: ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ: ಡಾ. ಹರೀಶ್ ಕುಮಾರ್
ಕಾರವಾರದಲ್ಲಿ ನಡೆದ ಮಾಹಿತಿ ಹಕ್ಕು ಕಾಯ್ದೆ ಕಾರ್ಯಾಗಾರದಲ್ಲಿ ಮಾತನಾಡಿದ ಆಯುಕ್ತ ಡಾ. ಹರೀಶ್ ಕುಮಾರ್, ಮಾಹಿತಿ ನೀಡಲು ವಿಳಂಬ ಮಾಡುವ ಅಧಿಕಾರಿಗಳಿಗೆ 25 ಸಾವಿರ ರೂ. ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದರು. ಜಿಲ್ಲೆಯಲ್ಲಿ 524 ಅರ್ಜಿಗಳು ಬಾಕಿ ಇರುವುದಾಗಿ ಅವರು ತಿಳಿಸಿದರು.

