ಮುಂಡಗೋಡ: ಬಸ್-ಲಾರಿ ಡಿಕ್ಕಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾವಲಕೊಪ್ಪ ಸಮೀಪ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

