ಕುಂದಾಪುರ, ಸೆಪ್ಟೆಂಬರ್ 15, 2025: ಭಾರತೀಯ ಜನತಾ ಪಕ್ಷದ ಧ್ವಜ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಹೋಲುವ ವ್ಯಂಗ್ಯ ಚಿತ್ರವನ್ನು ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡು, ದಂಗೆಯ ಚಿತ್ರಣದ ಮೂಲಕ ದೇಶದ ಸಾರ್ವಭೌಮತೆ, ಏಕತೆ ಮತ್ತು ಸಮಗ್ರತೆಗೆ ಅಪಾಯ ಉಂಟುಮಾಡುವ ದೇಶದ್ರೋಹಿ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಸಂಚಾಲಕ ರೋಷನ್ ಶೆಟ್ಟಿ ವಿರುದ್ಧ ಕುಂದಾಪುರ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ ನೇತೃತ್ವದ ತಂಡವು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ಮನವಿ ಪತ್ರ ಸಲ್ಲಿಸಿದೆ.
ಈ ಮನವಿ ಪತ್ರ ಸಲ್ಲಿಕೆ ಸಂದರ್ಭದಲ್ಲಿ ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ನಿಕಟಪೂರ್ವ ಅಧ್ಯಕ್ಷ ಶಂಕರ್ ಅಂಕದಕಟ್ಟೆ, ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರಸಾದ್ ಬಿಲ್ಲವ, ಕುಂದಾಪುರ ಮಂಡಲ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಚೇತನ್ ಖಾರ್ವಿ, ಕುಂದಾಪುರ ಮಂಡಲ ಉಪಾಧ್ಯಕ್ಷ ಸುನಿಲ್ ಶೆಟ್ಟಿ ಹೇರಿಕುದ್ರು, ಕುಂದಾಪುರ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಕಾಂಚನ್, ಸಂಗಮ್ ಮಂಡಲ ಯುವ ಮೋರ್ಚಾ ಕಾರ್ಯದರ್ಶಿ ರಂಜಿತ್ ದೇವಾಡಿಗ, ಪುರಸಭಾ ಸದಸ್ಯರಾದ ರಾಘವೇಂದ್ರ ಖಾರ್ವಿ, ಗಿರೀಶ್ ದೇವಾಡಿಗ, ಪ್ರಮುಖರಾದ ದಿವಾಕರ್ ಕಡ್ಗಿ, ನಾಗರಾಜ್ ಕಾಂಚನ್ ಮತ್ತು ಇನ್ನಿತರರು ಉಪಸ್ಥಿತರಿದ್ದರು.