ಕುಂದಾಪುರ: 10 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಅರೆಸ್ಟ್
ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸಿದ್ದಾಪುರದ ಶಶಿಕಾಂತ್ ಶೆಟ್ಟಿಯನ್ನು ಕುಂದಾಪುರ ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಹಿರಿಯಡ್ಕ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನ ವಿಧಿಸಿದೆ.

