ಮಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇರ್ಷಾದ್ ಖಾನ್ ನಿಧನ
ಸಕಲೇಶಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಿಕರ್ನಕಟ್ಟೆಯ ನಿವಾಸಿ ಮೊಹಮ್ಮದ್ ಇರ್ಷಾದ್ ಖಾನ್ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಅವರು ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಸಕ್ರಿಯ ಸಾಮಾಜಿಕ ಕಾರ್ಯಕರ್ತರಾಗಿದ್ದರು.

