ಮಣಿಪಾಲ: ಜೆಇಇ ಮೈನ್ಸ್ ಪರೀಕ್ಷೆಯಲ್ಲಿ ಅಕ್ರಮ ಯತ್ನ; ಉತ್ತರಾಖಂಡ ಮೂಲದ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲು
ಮಣಿಪಾಲದ ಜೆಇಇ ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಸಿ ಪ್ರಶ್ನೆಪತ್ರಿಕೆ ಫೋಟೋ ತೆಗೆಯುತ್ತಿದ್ದ ಉತ್ತರಾಖಂಡದ ವಿದ್ಯಾರ್ಥಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿಯಲಾಗಿದೆ. ಮಣಿಪಾಲ ಠಾಣೆಯಲ್ಲಿ ಪರೀಕ್ಷಾ ಅಕ್ರಮ ತಡೆ ಕಾಯ್ದೆಯಡಿ ಮೊಕದ್ದಮೆ ಹೂಡಲಾಗಿದೆ.

