ಮಣಿಪಾಲ: ಕೆಎಂಎಫ್ ಹಳೆಯ ಹಾಲು ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರಿ ಅನಾಹುತ
ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಘಟಕದಲ್ಲಿ ವೆಲ್ಡಿಂಗ್ ಮಾಡುವಾಗ ತೈಲಕ್ಕೆ ಬೆಂಕಿ ತಗುಲಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳದವರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದು, ಅಪಾರ ನಷ್ಟ ಸಂಭವಿಸಿದೆ.

