ಹೆಮ್ಮಾಡಿ, ಸೆಪ್ಟೆಂಬರ್ 03, 2025: ಉಡುಪಿ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ಕುಂದಾಪುರ ತಾಲೂಕಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮರಿಯಾ ವೈಯೊಲ ಬರೆಟ್ಟೋ ಜಿಲ್ಲಾ ಮಟ್ಟದಲ್ಲಿ ವಿಜೇತಳಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ಮರಿಯಾಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಗಣೇಶ್ ಮೊಗವೀರ್, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.