ಉಡುಪಿ: ಪ್ರಾಕೃತಿಕ ವಿಕೋಪ ಎದುರಿಸಲು ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ; ಸಚಿವ ಯು.ಟಿ.ಖಾದರ್ ಸೂಚನೆ
ಉಡುಪಿಯಲ್ಲಿ ನಡೆದ ಮುಂಗಾರು ಪೂರ್ವ ಸಿದ್ಧತಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪ್ರಾಕೃತಿಕ ವಿಕೋಪಗಳನ್ನು ಎದುರಿಸಲು ಇಲಾಖೆಗಳು ಜಂಟಿ ಸಮನ್ವಯ ಸಮಿತಿ ರಚಿಸಿಕೊಂಡು ಕೆಲಸ ಮಾಡಬೇಕು ಎಂದು ಆದೇಶಿಸಿದ್ದಾರೆ. ನೆರೆ ಸಂತ್ರಸ್ತರಿಗೆ ತಕ್ಷಣದ ಪರಿಹಾರ ಹಾಗೂ ಸೋರುವ ಶಾಲಾ ಕೊಠಡಿಗಳಲ್ಲಿ ತರಗತಿ ನಡೆಸದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

