ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಬೆಂಕಿ ಅವಘಡ: ಪ್ರಯಾಣಿಕರು ಪಾರು
ಕುಂದಾಪುರದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಶ್ರೀ ದುರ್ಗಾಂಬಾ ಬಸ್ ಹುಲಿಕಲ್ ಘಾಟಿಯಲ್ಲಿ ಸಂಪೂರ್ಣ ಸುಟ್ಟು ಹೋಗಿದೆ. ಬಸ್ ಸಿಬ್ಬಂದಿ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದರಿಂದ 35 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

