ಮಂಗಳೂರು, ಸೆಪ್ಟೆಂಬರ್ 01, 2025: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ನಾಯಕರ ಸಭೆಯು ದಿನಾಂಕ 02/09/2025ರ ಮಂಗಳವಾರದಂದು ತೊಕ್ಕೋಟು ಸಮೀಪದ ಕಲ್ಲಾಪು ಯುನಿಟಿ ಹಾಲ್‌ನಲ್ಲಿ ನಡೆಯಲಿದೆ. ಈ ಸಭೆಯು ಕ್ಷೇತ್ರ ಅಧ್ಯಕ್ಷರಾದ ಝಾಹಿದ್ ಮಲಾರ್ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ.
“ಬದಲಾವಣೆಗಾಗಿ ಕೊಡುಗೆ” (Contribution for Change) ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಡಿ.ಪಿ.ಐ ಪಕ್ಷವು ಸಾಮಾಜಿಕ ನ್ಯಾಯ, ಸಮಾನತೆ, ಮತ್ತು ಬದಲಾವಣೆಯ ಹಾದಿಯಲ್ಲಿ ಜನತೆಗೆ ಧೈರ್ಯ ತುಂಬುವ ಗುರಿಯೊಂದಿಗೆ ಈ ಸಭೆಯನ್ನು ಆಯೋಜಿಸಿದೆ. ಸಭೆಗೆ ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ, ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗೀಪೇಟೆ, ಮತ್ತು ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಭಾಗವಹಿಸಲಿದ್ದಾರೆ.
ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಅವರು ಪತ್ರಿಕಾ ಪ್ರಕಟನೆಯಲ್ಲಿ ಈ ವಿವರಗಳನ್ನು ತಿಳಿಸಿದ್ದಾರೆ.