ಗಂಗೊಳ್ಳಿ, ಸೆಪ್ಟೆಂಬರ್ 01, 2025: ಕರ್ನಾಟಕ ಸರ್ಕಾರದ ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ, ಮತ್ತು ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ ಆಶ್ರಯದಲ್ಲಿ ಆಗಸ್ಟ್ 30, 2025ರಂದು ನಡೆದ ಕುಂದಾಪುರ ತಾಲೂಕು ಮಟ್ಟದ 14 ವರ್ಷದೊಳಗಿನ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ಸಾಧನೆಯ ಮೂಲಕ ಶಾಲೆಯ ಕೀರ್ತಿಯನ್ನು ಇಮ್ಮಡಿಗೊಳಿಸಿದ್ದಾರೆ.
ಅಭಿನಂದನೆ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕಿ ಧರ್ಮಭಗಿನಿ ವಿಜಯ ಕ್ರಾಸ್ತಾ, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ಮತ್ತು ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.