ತೀರ್ಥಹಳ್ಳಿ: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕ ಬೆಂಕಿ; ದರೆಬೈಲಿಗೆ ಡಿಕ್ಕಿ ಹೊಡೆದು ವಾಹನ ಸಂಪೂರ್ಣ ಭಸ್ಮ
ಉಡುಪಿಯಿಂದ ಸೊರಬಕ್ಕೆ ತೆರಳುತ್ತಿದ್ದ ಡಸ್ಟರ್ ಕಾರಿನಲ್ಲಿ ತೀರ್ಥಹಳ್ಳಿಯ ನಾಲೂರು ಕೊಳಿಗೆ ಬಳಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಸುಹೇಲ್ ಸಮಯಪ್ರಜ್ಞೆಯಿಂದ ಕಾರಿನಿಂದ ಇಳಿದು ಬಚಾವಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು, ಕಾರು ಸಂಪೂರ್ಣ ಸುಟ್ಟು ಹೋಗಿದೆ.

