ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಹತಾಶ ಆರೋಪ; ರಘುಪತಿ ಭಟ್ ಬೇಷರತ್ ಕ್ಷಮೆಯಾಚಿಸಲಿ ಎಂದು ಬಿಜೆಪಿ ಆಗ್ರಹ
ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಮಾಜಿ ಶಾಸಕ ರಘುಪತಿ ಭಟ್ ಮಾಡುತ್ತಿರುವ ಆರೋಪಗಳು ರಾಜಕೀಯ ಹತಾಶೆಯಿಂದ ಕೂಡಿದ್ದು, ಅವರು ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಉಡುಪಿ ಬಿಜೆಪಿ ಘಟಕ ಆಗ್ರಹಿಸಿದೆ. ಪಕ್ಷಕ್ಕೆ ದ್ರೋಹ ಬಗೆದವರಿಗೆ ಶಾಸಕರನ್ನು ಟೀಕಿಸುವ ನೈತಿಕತೆ ಇಲ್ಲ ಎಂದು ಮುಖಂಡರು ಕಿಡಿಕಾರಿದ್ದಾರೆ.

