ಉಡುಪಿ: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ಆಕ್ರೋಶ
ಉಡುಪಿ ಜಿಲ್ಲಾಸ್ಪತ್ರೆ ಲೋಕಾರ್ಪಣೆ, ಪಿಂಚಣಿ ಆದಾಯ ಮಿತಿ ಹೆಚ್ಚಳ ಮತ್ತು ವಸತಿ ಸೌಲಭ್ಯ ಒದಗಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಉಡುಪಿ ಬಿಜೆಪಿ ಆರೋಪಿಸಿದೆ. ಬೇಡಿಕೆಗಳು ಈಡೇರದಿದ್ದರೆ ಜಿಲ್ಲಾವ್ಯಾಪಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಎಚ್ಚರಿಕೆ ನೀಡಿದ್ದಾರೆ.

