ಉಡುಪಿ, ಆಗಸ್ಟ್ 22, 2025: ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡದಲ್ಲಿ ಅಭಿವೃದ್ಧಿಗೆ ಅನುಕೂಲಕರ ವಾತಾವರಣವಿದ್ದು, ‘ಬ್ರ್ಯಾಂಡ್ ಕರಾವಳಿ’ ಹೆಸರಿನಲ್ಲಿ ಈ ಜಿಲ್ಲೆಗಳನ್ನು ಅಭಿವೃದ್ಧಿಪಡಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಅವರು ಉಡುಪಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅನೇಕ ದೇವಾಲಯಗಳಿದ್ದು, ಇವು ಪ್ರವಾಸೋದ್ಯಮಕ್ಕೆ ಪೂರಕವಾಗಿವೆ. ಹೊರ ರಾಜ್ಯಗಳಲ್ಲಿ ವಾಸಿಸುವ ಕರಾವಳಿ ಮೂಲದ ಉದ್ಯಮಿಗಳು ಈ ಭಾಗಕ್ಕೆ ಬಂದು ಬಂಡವಾಳ ಹೂಡಿದರೆ, ಮುಂದಿನ ಎರಡು-ಮೂರು ವರ್ಷಗಳಲ್ಲಿ ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಸಚಿವೆ ತಿಳಿಸಿದರು.
ಸಭೆಯಲ್ಲಿ ಸಚಿವರಾದ ಎಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್, ಮಂಕಾಳ್ ವೈದ್ಯ, ಕರಾವಳಿ ಜಿಲ್ಲೆಗಳ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮತ್ತು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.