ಉಡುಪಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಸಿಐಟಿಯು ಮನವಿ

ಉಡುಪಿಯಲ್ಲಿ ಸಿಐಟಿಯು ನೇತೃತ್ವದ ವಿವಿಧ ಕಾರ್ಮಿಕ ಸಂಘಟನೆಗಳು ಟಾಟಾ ಕಂಪನಿಗೆ ವಿದ್ಯುತ್ ವಿತರಣಾ ಲೈಸನ್ಸ್ ನೀಡುವುದನ್ನು ಮತ್ತು ವಿದ್ಯುತ್ ಖಾಸಗೀಕರಣವನ್ನು ವಿರೋಧಿಸಿ ಮೆಸ್ಕಾಂ ಸಹಾಯಕ ಇಂಜಿನಿಯರ್ ಮೂಲಕ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ ಮಂಗಳವಾರ ಆಕ್ಷೇಪಣಾ ಮನವಿ ಸಲ್ಲಿಸಿದವು.