ಉಡುಪಿ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ತಡೆಗೆ ಮಾಸ್ಟರ್ ಪ್ಲಾನ್: ಎಲ್ಲಾ ತಾಲೂಕುಗಳಲ್ಲಿ ನಿವಾರಣಾ ಕೇಂದ್ರ ಸ್ಥಾಪನೆಗೆ ಜಾಗ ಗುರುತು
ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ ಉಡುಪಿ ಜಿಲ್ಲೆಯಾದ್ಯಂತ ಬೀದಿ ನಾಯಿಗಳ ಆಶ್ರಯತಾಣಕ್ಕಾಗಿ ಜಾಗ ಗುರುತಿಸಲಾಗಿದೆ. ಜಿಲ್ಲೆಯ 253 ಪ್ರಮುಖ ಸಂಸ್ಥೆಗಳಲ್ಲಿ 440 ನಾಯಿಗಳು ಪತ್ತೆಯಾಗಿದ್ದು, ಇವುಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.

