ಉಡುಪಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗುತ್ತಿದೆ.
ಈ ಸಮೀಕ್ಷೆ ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ನಡೆಯಲಿದ್ದು, ಈ ಅವಧಿಯಲ್ಲಿ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಅಗತ್ಯ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿಯಿಂದ ತಿಳಿಸಲಾಗಿದೆ.
ಸಮೀಕ್ಷೆಗೆ ಸಾರ್ವಜನಿಕರು ಸಹಕರಿಸಬೇಕಾಗಿ ಮನವಿ ಮಾಡಲಾಗಿದ್ದು, ಈ ಕೆಳಗಿನ ದಾಖಲೆಗಳನ್ನು ಸಿದ್ಧವಾಗಿಡುವಂತೆ ಸೂಚಿಸಲಾಗಿದೆ:
- ರೇಷನ್ ಕಾರ್ಡ್
- ಕುಟುಂಬದ ಸದಸ್ಯರ ಆಧಾರ್ ಕಾರ್ಡ್ ಮತ್ತು ಆಧಾರ್ ಸಂಖ್ಯೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆ (ಲಿಂಕ್ ಇಲ್ಲದಿದ್ದರೆ ಸಮೀಪದ ಆಧಾರ್ ಕೇಂದ್ರ ಅಥವಾ ಅಂಚೆ ಕಚೇರಿಗೆ ಭೇಟಿ ನೀಡಿ ಲಿಂಕ್ ಮಾಡಿಸಿಕೊಳ್ಳುವುದು)
- ಚುನಾವಣಾ ಗುರುತಿನ ಚೀಟಿ
- ವಿಕಲಚೇತನರಾದರೆ UID ಕಾರ್ಡ್ ಅಥವಾ ಅಂಗವಿಕಲ ಪ್ರಮಾಣ ಪತ್ರ
ಸಮೀಕ್ಷೆ ಯಶಸ್ವಿಯಾಗಿ ಪೂರ್ಣಗೊಳ್ಳಲು ಸಾರ್ವಜನಿಕರಿಂದ ಪೂರ್ಣ ಸಹಕಾರ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ತಿಳಿಸಿದ್ದಾರೆ.