ಉಡುಪಿ: ಅಬಕಾರಿ ಡಿಸಿ ಶ್ರೀನಿವಾಸ್ ಮನೆ ಮೇಲೆ ಲೋಕಾಯುಕ್ತ ದಾಳಿ; 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ
ಉಡುಪಿ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ. ಅವರಿಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಸುಮಾರು 8.69 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದೆ. ಇದರಲ್ಲಿ ಅಪಾರ ಪ್ರಮಾಣದ ಭೂಮಿ, ಮನೆ ಹಾಗೂ ಚಿನ್ನಾಭರಣಗಳು ಸೇರಿವೆ.

