ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ
ಉಡುಪಿ ಜಿಲ್ಲೆಯ ಮೀನುಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಆಸಕ್ತರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿ, ಮೂಲ ಪ್ರತಿಯನ್ನು ಉಡುಪಿ, ಕುಂದಾಪುರ ಅಥವಾ ಕಾರ್ಕಳ ಕಚೇರಿಗೆ ನೀಡಬೇಕಾಗಿ ಕೋರಲಾಗಿದೆ.

