ಉಡುಪಿ, ಸೆಪ್ಟೆಂಬರ್ 09, 2025: ನಗರದ ಚಿತ್ತರಂಜನ್ ಸರ್ಕಲ್ ಬಳಿಯ ‘ವೈಭವ್ ರಿಫೈನರ್’ ಎಂಬ ಜ್ಯುವೆಲರಿ ವರ್ಕ್‌ಶಾಪ್‌ಗೆ ಸೋಮವಾರ ರಾತ್ರಿ ಕಳ್ಳರು ನುಗ್ಗಿ, ಚಿನ್ನದ ದ್ರವ ಸೇರಿದಂತೆ ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ.
ಕಳ್ಳರು ಅಂಗಡಿಯ ಶಟರ್‌ನ ಬೀಗ ಮುರಿದು ಒಳನುಗ್ಗಿದ್ದಾರೆ ಎಂದು ತಿಳಿದುಬಂದಿದ್ದು, ಚಿನ್ನ ಮತ್ತು ಬೆಳ್ಳಿಯ ಸೊತ್ತುಗಳನ್ನು ಕದ್ದಿರುವ ಬಗ್ಗೆ ಮಾಹಿತಿ ಲಭಿಸಿದೆ. ಕಳವಿನ ಸಂಪೂರ್ಣ ವಿವರಗಳು ಇನ್ನಷ್ಟೇ ಬಹಿರಗೊಳ್ಳಬೇಕಾಗಿದೆ.

ಘಟನೆಯ ಸುದ್ದಿ ತಿಳಿದ ಕೂಡಲೇ ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಮತ್ತು ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದು, ಕಳ್ಳತನದ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.