ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಹರಿಕಥೆ ವಿವಾದ: ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆ; ಕ್ಷಮೆಯಾಚನೆ

ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಮಧ್ವಾಚಾರ್ಯರ ಚರಿತ್ರೆ ನಿರೂಪಿಸುವಾಗ ಆದಿ ಶಂಕರಾಚಾರ್ಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಹರಿಕಥಾ ಕಲಾವಿದರ ನಡೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ವಿವಾದದ ಬೆನ್ನಲ್ಲೇ ಕಲಾವಿದೆ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.