ಉಡುಪಿ: ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ; ಸಾಮೂಹಿಕ ರಾಜೀನಾಮೆ ಘೋಷಿಸಿದ ಕಾರ್ಯಕರ್ತೆಯರು
ಉಡುಪಿ ಜಿಲ್ಲಾ ಕರವೇ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಜ್ಯೋತಿ ಶೇರಿಗಾರ್ತಿ ಅವರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ ಮೀರಾ ಮತ್ತು ತಂಡದ ಸದಸ್ಯೆಯರು ಸಾಮೂಹಿಕ ರಾಜೀನಾಮೆ ಘೋಷಿಸಿದ್ದಾರೆ. ಸಂಘಟನೆಯಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಿದ ಆರೋಪದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

