ಉಡುಪಿ: ಎಸ್‌ಐಆರ್ ಪ್ರಕ್ರಿಯೆ ನಿರ್ಲಕ್ಷ್ಯಿಸಬೇಡಿ, ಎಲ್ಲಾ ಜಮಾಅತ್‌ಗಳಲ್ಲಿ ಜಾಗೃತಿ ಮೂಡಿಸಿ; ಕುಂಬೋಳ್ ತಂಙಳ್ ಕರೆ

ಮೂಳೂರಿನಲ್ಲಿ ನಡೆದ ಜಿಲ್ಲಾ ಜಮಾಅತ್ ಅಸ್ಸೆಂಬ್ಲೇಜ್‌ನಲ್ಲಿ ಮಾತನಾಡಿದ ಕುಂಬೋಳ್ ತಂಙಳ್, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮತ್ತು ಆಂತರಿಕ ಸಮಸ್ಯೆಗಳನ್ನು ಜಮಾಅತ್ ಮಟ್ಟದಲ್ಲೇ ಬಗೆಹರಿಸಿಕೊಳ್ಳುವಂತೆ ಕರೆ ನೀಡಿದರು.