ಉಡುಪಿ: ಅಡುಗೆ ಅನಿಲ ಕೊರತೆ ವಿರುದ್ಧ ಜನವಾದಿ ಮಹಿಳಾ ಸಂಘಟನೆ ಆಕ್ರೋಶ; “ಕಾಫಿ” ಮಾಡಿ ಪ್ರತಿಭಟನೆ
ಅಡುಗೆ ಅನಿಲದ ಅಭಾವ ಮತ್ತು ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯ ಅಜ್ಜರಕಾಡುವಿನಲ್ಲಿ ಜನವಾದಿ ಮಹಿಳಾ ಸಂಘಟನೆಯಿಂದ ಪ್ರತಿಭಟನೆ ನಡೆಯಿತು. ಒಲೆಯಲ್ಲಿ ಕಾಫಿ ತಯಾರಿಸುವ ಮೂಲಕ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಸಂಘಟನೆಯ ಮುಖಂಡರು ಆಕ್ರೋಶ ಹೊರಹಾಕಿದರು.

