ಉಡುಪಿ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಲ್ಪೆ ಪೊಲೀಸರ ಬಲೆಗೆ
ಬೆಂಗಳೂರಿನ ನಿವಾಸಿ ಎಂ. ಬಾಬು ಎಂಬಾತ ಉಡುಪಿಯಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವೊಂದರಲ್ಲಿ ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದನು. ಮಲ್ಪೆ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

