ಉಡುಪಿ: ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ‘ನಮ್ಮ ಮತ ನಮ್ಮ ಹಕ್ಕು’ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಉಡುಪಿಯಲ್ಲಿ ‘ನಮ್ಮ ಮತ ನಮ್ಮ ಹಕ್ಕು’ ಒಕ್ಕೂಟದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಪ್ರತಿಭಟನೆ ನಡೆಯಿತು. ಮತದಾನದ ಹಕ್ಕನ್ನು ಕಸಿದುಕೊಳ್ಳುವ ಈ ಪ್ರಕ್ರಿಯೆಯನ್ನು ತಡೆಯುವಂತೆ ಮತ್ತು ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಪ್ರಕ್ರಿಯೆ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

