ಉಡುಪಿ: ಜಿಲ್ಲೆಯಲ್ಲಿ ಪೊಲೀಸರ ಮಿಂಚಿನ ಕಾರ್ಯಾಚರಣೆ; 32 ಅಕ್ರಮ ಹೋಂಸ್ಟೇಗಳ ಪತ್ತೆ
ಪ್ರವಾಸೋದ್ಯಮದ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ಉಡುಪಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 32 ಅಕ್ರಮ ಹೋಂಸ್ಟೇಗಳು ಪತ್ತೆಯಾಗಿವೆ. ವಿದೇಶಿ ಪ್ರವಾಸಿಗರ ಭದ್ರತೆ ಮತ್ತು ನೋಂದಣಿ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

