ಉಡುಪಿ: ಶಾಸಕ ಯಶ್‌ಪಾಲ್ ಸುವರ್ಣ ಮತ್ತು ಆಯುಕ್ತರ ವಿರುದ್ಧ ರಘುಪತಿ ಭಟ್ ಆಕ್ರೋಶ; ಯುಡಿಎ ಕಚೇರಿ ಎದುರು ಪ್ರತಿಭಟನೆ
ರೆಸಾರ್ಟ್ ಯೋಜನೆಗೆ ಅನುಮತಿ ನೀಡದ ಹಿನ್ನೆಲೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ ರಾಜಕೀಯ ದ್ವೇಷ ಸಾಧಿಸುತ್ತಿದ್ದಾರೆ ಮತ್ತು ಆಯುಕ್ತರು ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

