ಶಿಕ್ಷಣ

ಉಡುಪಿ: ಭಾರೀ ಮಳೆಯಿಂದಾಗಿ ಆಗಸ್ಟ್ 28ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ, ಆಗಸ್ಟ್ 27, 2025: ಭಾರೀ ಮಳೆಯಿಂದಾಗಿ ಆಗಸ್ಟ್ 28ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಐಟಿಐ, ಪದವಿಪೂರ್ವ ಕಾಲೇಜುಗಳಿಗೆ ರಜೆ. ಪದವಿ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಇಲ್ಲ.

ಉಡುಪಿ: ಭಾರೀ ಮಳೆಯಿಂದಾಗಿ ಆಗಸ್ಟ್ 28ರಂದು ಶಾಲಾ-ಕಾಲೇಜುಗಳಿಗೆ ರಜೆ

ಉಡುಪಿ, ಆಗಸ್ಟ್ 27, 2025: ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗೃತ ಕ್ರಮವಾಗಿ, ಜಿಲ್ಲಾಧಿಕಾರಿಯವರು ಆಗಸ್ಟ್ 28, 2025 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆಗಳು, ಐಟಿಐ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಆದರೆ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಿಸಲಾಗಿಲ್ಲ.

ಈ ಲೇಖನವನ್ನು ಹಂಚಿಕೊಳ್ಳಿ